Psalms 41:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ ಯೆಹೋವನು ಅವನಿಗೆ ಬಲವನ್ನು ಕೊಡುವನು. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿದ್ದರೂ ಯೆಹೋವನು ಅವನನ್ನು ಗುಣಪಡಿಸುವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.
Kannada BSI Bible 2016
ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ ಆರೋಗ್ಯವನ್ನುಂಟುಮಾಡಿದಿಯಲ್ಲಾ, ಸ್ವಾಮೀ.
Kannada Bible (KNCL) BSI 2016
ರೋಗದಿ ಹಾಸಿಗೆ ಹಿಡಿದಿರಲು ಪ್ರಭು ಸುಧಾರಿಸುವನು I ರೋಗ ನಿವಾರಿಸಿ ಅವನಿಗೆ ಆರೋಗ್ಯವನೀಯುವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವರನ್ನು ಪರಾಮರಿಸುವವರನ್ನು ಯೆಹೋವ ದೇವರು ವ್ಯಾಧಿಯ ಮಂಚದಲ್ಲಿ ಬಲಪಡಿಸುವರು; ಅವರ ಅಸ್ವಸ್ಥತೆಯನ್ನು ಯೆಹೋವ ದೇವರು ಹೋಗಲಾಡಿಸಿ ಮರುಸ್ಥಾಪಿಸುವರು.