Psalms 41:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಆತನಿಗೆ, “ಯೆಹೋವನೇ, ನನಗೆ ದಯೆತೋರು. ನಾನು ನಿನಗೆ ವಿರೋಧವಾಗಿ ಪಾಪಮಾಡಿದ್ದೇನೆ, ಆದರೂ ನನ್ನನ್ನು ಕ್ಷಮಿಸಿ ಗುಣಪಡಿಸು” ಎಂದು ಹೇಳಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು.
Kannada BSI Bible 2016
ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತೂ - ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು ಅಂದೆನು.
Kannada Bible (KNCL) BSI 2016
ನಾನಂತು, “ಪ್ರಭೂ ಕರುಣಿಸು, ಗುಣಪಡಿಸೆನ್ನನು I ನಿನಗೆ ವಿರುದ್ಧ ಪಾಪಗೈದೆ” ಎಂದು ಬೇಡುವೆನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರೇ, ನನಗೆ ಕರುಣೆ ತೋರಿಸಿ ನನ್ನನ್ನು ಸ್ವಸ್ಥಮಾಡಿರಿ, ಏಕೆಂದರೆ ನಿಮಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದು ನಾನು ಹೇಳಿ ಬೇಡುವೆನು.