Psalms 41:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನನ್ನು ನೋಡಲು ಬಂದವರು ಕಪಟದ ಮಾತಾಡುವರು; ಅವರು ನನ್ನ ಸಮಾಚಾರವನ್ನು ಸಂಗ್ರಹಿಸಿಕೊಂಡು ಸುಳ್ಳುಸುದ್ದಿಯನ್ನು ಹಬ್ಬಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
Kannada BSI Bible 2016
ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲೊಬ್ಬನು ನನ್ನನ್ನು ನೋಡುವದಕ್ಕೆ ಬಂದರೆ ಕಪಟದ ಮಾತನ್ನಾಡುವನು; ಮನಸ್ಸಿನಲ್ಲಿ ಅಶುಭಗಳನ್ನು ಸಂಗ್ರಹಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
Kannada Bible (KNCL) BSI 2016
ನೋಡಬರುವರು, ನವಿರಾದ ಮಾತನಾಡುವರವರು I ಕೇಡನೆ ತುಂಬಿಸಿಕೊಂಡು ಹೊರಬಂದೊಡನೆ ಹರಡುವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ನೋಡುವುದಕ್ಕೆ ಅವರಲ್ಲಿ ಒಬ್ಬನು ಬಂದರೆ, ಕಪಟವಾಗಿ ಮಾತನಾಡುತ್ತಾನೆ. ಅವನ ಹೃದಯ ಕೇಡನ್ನು ಕೂಡಿಟ್ಟುಕೊಳ್ಳುತ್ತಿದೆ. ಅವನು ಹೊರಗೆ ಹೋದ ಮೇಲೆ ಕೇಡನ್ನು ಹಬ್ಬಿಸುತ್ತಾನೆ.