Psalms 42:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
Kannada BSI Bible 2016
ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
Kannada Bible (KNCL) BSI 2016
ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.