Psalms 42:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜಲಪಾತದ ಘೋಷದಂತೆಯೂ ಪ್ರವಾಹದ ಬರ್ಜನೆಯಂತೆಯೂ ಇಕ್ಕಟ್ಟುಗಳು ನನಗೆ ಬಂದಿವೆ. ಸಮುದ್ರದ ಅಲೆಗಳಂತೆ ದುಃಖವು ನನ್ನನ್ನು ಆವರಿಸಿಕೊಂಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.
Kannada BSI Bible 2016
ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಜಲಪಾತಗಳಿಂದುಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕೂಗುತ್ತದೋ ಎಂಬಂತಿರುವದು. ಹಾಗೆಯೇ ನೀನು ಅಲ್ಲಕಲ್ಲೋಲವಾದ [ದುಃಖ ಪ್ರವಾಹದ] ತೆರೆಗಳನ್ನು ನನ್ನ ತಲೆಯ ಮೇಲೆ ದಾಟಿಸಿದಿಯಲ್ಲಾ.
Kannada Bible (KNCL) BSI 2016
ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಜಲಪಾತಗಳ ಶಬ್ದವು ಒಂದು ಪ್ರವಾಹವು ಮತ್ತೊಂದು ಪ್ರವಾಹಕ್ಕೆ ಕರೆಯುವಂತಿದೆ. ಅದರಂತೆಯೇ ನಿಮ್ಮ ಎಲ್ಲಾ ಅಲೆಗಳೂ ತೆರೆಗಳೂ ನನ್ನ ಮೇಲೆ ಹಾದು ಹೋದಂತಿವೆ.