Psalms 42:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಗಲಲ್ಲಿ ಯೆಹೋವನು ನನಗೆ ನಿಜಪ್ರೀತಿಯನ್ನು ತೋರುವುದರಿಂದ ಜೀವಸ್ವರೂಪನಾದ ಆತನಿಗೆ ಪ್ರತಿ ರಾತ್ರಿಯಲ್ಲಿಯೂ ನೂತನ ಕೀರ್ತನೆಯನ್ನು ಹಾಡುವೆ; ಆತನಲ್ಲಿ ಪ್ರಾರ್ಥಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.
Kannada BSI Bible 2016
ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.
Kannada Bible (KNCL) BSI 2016
ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಹಗಲಿನಲ್ಲಿ ಯೆಹೋವ ದೇವರು ತಮ್ಮ ಪ್ರೀತಿಯನ್ನು ಆಜ್ಞಾಪಿಸುವರು. ರಾತ್ರಿಯಲ್ಲಿ ದೇವರ ಹಾಡನ್ನು ಹಾಡುವೆನು. ನನ್ನ ಜೀವವಾಗಿರುವ ದೇವರಿಗೆ ನಾನು ಪ್ರಾರ್ಥನೆ ಮಾಡುವೆನು.