Psalms 42:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು.
Kannada BSI Bible 2016
ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಶರಣನಿಗೆ - ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿ? ನಾನು ಯಾಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು ಎಂದು ಮೊರೆಯಿಡುವೆನು.
Kannada Bible (KNCL) BSI 2016
ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಪೀಡಿತನಾಗಿ ದುಃಖದಲ್ಲಿ ಸಾಗಬೇಕು?” ಎಂದು ನನ್ನ ಶರಣನಾದ ದೇವರಿಗೆ ಮೊರೆಯಿಡುವೆನು.