Psalms 43:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? ಶತ್ರು ಬಾಧೆಯಿಂದ ನಾನೇಕೆ ದುಃಖಿಸುತ್ತಾ ಸಂಕಟಪಡಬೇಕು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಏಕೆ ನನ್ನನ್ನು ತಳ್ಳಿಬಿಟ್ಟೆ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?
Kannada BSI Bible 2016
ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಯಾಕೆ ನನ್ನನ್ನು ತಳ್ಳಿಬಿಟ್ಟಿ? ನಾನು ಯಾಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?
Kannada Bible (KNCL) BSI 2016
ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ? I ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನ ದೇವರು, ನನ್ನ ಬಲವಾದ ಕೋಟೆಯು; ನೀವು ಏಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಯಿಂದ ದುಃಖದಲ್ಲಿ ನಡೆದುಕೊಳ್ಳಬೇಕು?