Psalms 43:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ. ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ. ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.
Kannada BSI Bible 2016
ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸತ್ಯಪ್ರಸನ್ನತೆಗಳನ್ನು [ದೂತರನ್ನೋ ಎಂಬಂತೆ] ಕಳುಹಿಸು; ಅವೇ ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಸೇರಿಸಲಿ.
Kannada Bible (KNCL) BSI 2016
ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಬೆಳಕನ್ನೂ ನಿಮ್ಮ ಸತ್ಯವನ್ನೂ ಕಳುಹಿಸಿರಿ; ಅವು ನನ್ನನ್ನು ನೀವು ವಾಸಿಸುವ ನಿಮ್ಮ ಪರಿಶುದ್ಧ ಪರ್ವತಕ್ಕೆ ನನ್ನನ್ನು ಬರಮಾಡಲಿ.