Psalms 43:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
Kannada BSI Bible 2016
ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
Kannada Bible (KNCL) BSI 2016
ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.