Psalms 44:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.
Kannada BSI Bible 2016
ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿನದಲ್ಲಿ ನೀನು ನಡಿಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.
Kannada Bible (KNCL) BSI 2016
ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.