Psalms 44:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೊಯ್ಯಲ್ಪಡುವ ಕುರಿಗಳೋ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ; ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಟ್ಟಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.
Kannada BSI Bible 2016
ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುರಿಗಳನ್ನೋ ಎಂಬಂತೆ ನಮ್ಮನ್ನು ಘಾತುಕರಿಗೆ ಒಪ್ಪಿಸಿದ್ದೀ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿಬಿಟ್ಟಿದ್ದೀ.
Kannada Bible (KNCL) BSI 2016
ನಮ್ಮನೊಪ್ಪಿಸಿರುವೆ ವಧ್ಯಸ್ಥಾನಕೊಯ್ದ ಕುರಿಗಳಂತೆ I ಚದರಿಸಿಬಿಟ್ಟಿರುವೆ ನಮ್ಮನು ಅನ್ಯ ಜನಾಂಗಗಳ ಮಧ್ಯೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಡಿಯತಕ್ಕ ಕುರಿಗಳಂತೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀರಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀರಿ.