Psalms 44:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
Kannada BSI Bible 2016
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ ನಮ್ಮ ಪಿತೃಗಳನ್ನೇ ನೆಲೆಗೊಳ್ಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
Kannada Bible (KNCL) BSI 2016
ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.