Psalms 45:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು. ಅವನು ನಿನಗೆ ಹೊಸ ಯಜಮಾನನಾಗಿರುವನು. ಆದ್ದರಿಂದ ನೀನು ಅವನನ್ನು ಗೌರವಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು.
Kannada BSI Bible 2016
ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನಿಗೆ ನಮಸ್ಕರಿಸು.
Kannada Bible (KNCL) BSI 2016
ಆಗ ಬಯಸುವನು ರಾಜ ನಿನ್ನ ಲಾವಣ್ಯವನು I ಆತನ ಪಾದಕ್ಕೆರಗು, ಆತನೇ ನಿನಗೊಡೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸೌಂದರ್ಯವನ್ನು ಮಹಾರಾಜರು ಮೆಚ್ಚಲಿ, ಅವರೇ ನಿನ್ನ ಒಡೆಯ ಅವರನ್ನು ಗೌರವಿಸು.