Psalms 45:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ. ನಿನ್ನ ಮಾತುಗಳು ಮನೋಹರವಾಗಿವೆ. ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.
Kannada BSI Bible 2016
ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹಳ ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬದು ನಿನ್ನ ಬಾಯ ಮಾತುಗಳಿಂದ ಸ್ಪಷ್ಟವಾಗುತ್ತದೆ.
Kannada Bible (KNCL) BSI 2016
ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಎಲ್ಲಾ ಮನುಷ್ಯರಿಗಿಂತ ಅತಿ ಸುಂದರರಾಗಿದ್ದೀರಿ. ನಿಮ್ಮ ತುಟಿಗಳಲ್ಲಿ ಕೃಪೆಯ ಅಭಿಷೇಕವಿದೆ; ಆದ್ದರಿಂದ ದೇವರು ಎಂದೆಂದಿಗೂ ನಿಮ್ಮನ್ನು ಆಶೀರ್ವದಿಸಿದ್ದಾರೆ.