Psalms 45:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು. ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.
Kannada BSI Bible 2016
ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ಯತೆದೈನ್ಯನೀತಿಗಳನ್ನು ಸ್ಥಾಪಿಸುವದಕ್ಕಾಗಿ ಆಡಂಬರದಿಂದ ವಾಹನಾರೂಢನಾಗಿ ವಿಜಯೋತ್ಸವದೊಡನೆ ಹೊರಡೋಣವಾಗಲಿ. ನಿನ್ನ ಭುಜವೀರ್ಯದಿಂದ ಭಯಂಕರಕೃತ್ಯಗಳು ನಡೆಯುವವು.
Kannada Bible (KNCL) BSI 2016
ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸತ್ಯತೆ ದೀನತ್ವ ಹಾಗು ನೀತಿಗೋಸ್ಕರ ನಿಮ್ಮ ಘನತೆಯಿಂದ ಜಯದ ಸವಾರಿ ಮಾಡಿರಿ. ನಿಮ್ಮ ಬಲಗೈ ಮಹಾಕೃತ್ಯಗಳನ್ನು ಪ್ರಕಾಶಪಡಿಸಲಿ.