Psalms 45:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.
Kannada BSI Bible 2016
ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.
Kannada Bible (KNCL) BSI 2016
ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ.