Psalms 45:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಬಟ್ಟೆಗಳು ಪರಿಮಳದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ. ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷಪಡಿಸಲು ವಾದ್ಯಗಳನ್ನು ನುಡಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.
Kannada BSI Bible 2016
ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದಿವ್ಯಾಂಬರಗಳು ರಕ್ತಬೋಳ ಅಗರು ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತಮಂದಿರಗಳೊಳಗೆ ಉತ್ಕೃಷ್ಟವಾದ್ಯಗಳು ನಿನ್ನನ್ನು ಆನಂದಗೊಳಿಸುವವು.
Kannada Bible (KNCL) BSI 2016
ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ವಸ್ತ್ರಗಳೆಲ್ಲಾ ರಸಗಂಧವೂ ಅಗರೂ ಚಂದನ ಇವುಗಳ ಸುವಾಸನೆ ಬೀರುತ್ತದೆ. ದಂತದ ಅರಮನೆಯೊಳಗಿಂದ ಉನ್ನತ ವಾದ್ಯಗಳು ನಿಮ್ಮನ್ನು ಆನಂದಗೊಳಿಸುವುದು.