Psalms 45:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ, ನಿನ್ನ ಪಟ್ಟದರಾಣಿಯು ಓಫೀರ್ ದೇಶದ ಬಂಗಾರದಿಂದ ಮಾಡಿದ ಕಿರೀಟವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿರುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು.
Kannada BSI Bible 2016
ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫಿರ್ ದೇಶದ ಬಂಗಾರದ ಆಭರಣಗಳಿಂದ ಭೂಷಿತಳಾಗಿ ನಿನ್ನ ಬಲಭಾಗದಲ್ಲಿ ನಿಂತಿರುವಳು.
Kannada Bible (KNCL) BSI 2016
ರಾಜಕುವರಿಯರಿಹರು ನಿನ್ನ ಸ್ತ್ರೀ ಪರಿವಾರದಲಿ I ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲಿ I ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜ ಪುತ್ರಿಯರು ನಿಮ್ಮ ಗೌರವ ಸ್ತ್ರೀಯರಲ್ಲಿ ಇದ್ದಾರೆ. ನಿಮ್ಮ ಬಲಗಡೆ ರಾಣಿಯು ಓಫೀರ್ ಬಂಗಾರವನ್ನು ಧರಿಸಿದ್ದಾಳೆ.