Psalms 46:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ?
Kannada BSI Bible 2016
ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುದ್ರವು ಘೋಷಿಸುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರೇನು? ಸೆಲಾ.
Kannada Bible (KNCL) BSI 2016
ಸಮುದ್ರ ಭೋರ್ಗರೆದರೇನು? ನೊರೆಕಾರಿದರೇನು? I ಅದರೊಡನೆ ಪರ್ವತಗಳು ಅಲುಗಾಡಿದರೇನು? II ನಮ್ಮ ಕಡೆಗಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವನು ನಮಗಾಶ್ರಯ ದುರ್ಗವು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಸಮುದ್ರವು ಘೋಷಿಸಿ ನೊರೆಕಾರಿದರೂ, ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು.