Psalms 47:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.
Kannada BSI Bible 2016
ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳಲ್ಲಿ ಶ್ರೇಷ್ಠರಾದವರು ಅಬ್ರಹಾಮನ ದೇವರ ಪ್ರಜೆಯಾಗಿರುವದಕ್ಕೆ ಕೂಡಿಬರುತ್ತಾರೆ; ಯಾಕಂದರೆ ಭೂಪಾಲಕರೆಲ್ಲಾ ದೇವರಿಗೇ ಅಧೀನರಾಗಿದ್ದಾರೆ. ಆತನೇ ಸರ್ವೋನ್ನತನು.
Kannada Bible (KNCL) BSI 2016
ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II ಭೂಪಾಲರೆಲ್ಲರೂ ದೇವರಿಗೆ ಅಧೀನರು I ಸರ್ವೋನ್ನತನು, ಸಾರ್ವಭೌಮನು ದೇವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.