Psalms 48:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.
Kannada BSI Bible 2016
ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ - ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡಿಸುವವನಾಗಿದ್ದಾನೆ ಎಂದು ತಿಳಿಸುವಿರಿ.
Kannada Bible (KNCL) BSI 2016
ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.