Psalms 48:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು. ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. ಅದೇ ಆ ಮಹಾರಾಜನ ಪರ್ವತ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
Kannada BSI Bible 2016
ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ ರಮ್ಯವಾಗಿಯೂ ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವದು.
Kannada Bible (KNCL) BSI 2016
ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.