Psalms 49:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು. ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
Kannada BSI Bible 2016
ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಜ್ಞಾನಿಗಳು ಸಾಯುವದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
Kannada Bible (KNCL) BSI 2016
ಬುದ್ಧಿಜೀವಿಗಳೂ ಸಾಯುವುದು ಖಂಡಿತ I ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I ಅವರ ಸೊತ್ತು ಪರರ ಪಾಲು, ಇದೂ ಖಚಿತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಜ್ಞಾನಿಗಳು ಸಾಯುವುದನ್ನು ಕಾಣುತ್ತೇವೆ. ಹಾಗೆಯೇ ಮೂರ್ಖರೂ ಜ್ಞಾನಹೀನರೂ ಸಹ ನಾಶವಾಗುತ್ತಾರೆ. ಅವರ ಆಸ್ತಿಯನ್ನು ಇತರರು ಪಡೆಯುತ್ತಾರೆ.