Psalms 49:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಐಶ್ವರ್ಯವಂತರಾಗಿದ್ದರೂ ಭೂಲೋಕದಲ್ಲಿ ಶಾಶ್ವತವಾಗಿ ಇರಲಾಗದು. ಎಲ್ಲರೂ ಪ್ರಾಣಿಗಳಂತೆಯೇ ಸಾಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.
Kannada BSI Bible 2016
ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಿಲ್ಲ; ಪಶುಗಳಂತೆಯೇ ಇಲ್ಲವಾಗುತ್ತಾನೆ.
Kannada Bible (KNCL) BSI 2016
ನೆಲೆಯಾಗಿರನು ನರನು ಪಟ್ಟಪದವಿಯಲಿ I ನಾಶವಾಗುವನು ಪಶುಪ್ರಾಣಿಗಳ ಪರಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನು ಎಷ್ಟು ಆಸ್ತಿ ಗೌರವ ಸಂಪಾದಿಸಿದ್ದರೂ, ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ.