Psalms 49:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.
Kannada BSI Bible 2016
ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.
Kannada Bible (KNCL) BSI 2016
ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು.