Psalms 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.
Kannada BSI Bible 2016
ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದವರು; ಆದದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವದರಿಂದ ಅವರನ್ನು ದೊಬ್ಬಿಬಿಡು.
Kannada Bible (KNCL) BSI 2016
ಅವರಪರಾಧಿಗಳೆಂದು ಹೇ ದೇವಾ, ನಿರ್ಣಯಿಸಿಬಿಡು I ಅವರ ಮೋಸದ ಪಾಶದಲೇ ಅವರನು ಸಿಕ್ಕಿಸಿಬಿಡು I ಅವರನೇಕ ಪಾಪಗಳಿಗಾಗಿ ಅವರನು ದಬ್ಬಿಬಿಡು I ಅವರು ನಿನ್ನ ವಿರುದ್ಧ ದಂಗೆಯೆದ್ದವರು, ನೋಡು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.