Psalms 5:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರುನೋಡುವೆನು; ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
Kannada BSI Bible 2016
ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವದು; ಉದಯಕಾಲದಲ್ಲಿಯೇ [ಪ್ರಾರ್ಥನೆಯನ್ನು] ಸಮರ್ಪಿಸಿ ಸದುತ್ತರವನ್ನು ಎದುರುನೋಡುತ್ತಿರುವೆನು.
Kannada Bible (KNCL) BSI 2016
ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಉದಯಕಾಲದಲ್ಲಿ ನನ್ನ ಸ್ವರವನ್ನು ಕೇಳಿರಿ; ಮುಂಜಾನೆಯಲ್ಲಿ ನಾನು ನನ್ನ ಬೇಡಿಕೆಗಳನ್ನು ನಿಮ್ಮ ಮುಂದೆ ಸಮರ್ಪಿಸಿ, ಎದುರುನೋಡುತ್ತಾ ಕಾದುಕೊಂಡಿರುವೆನು.