Psalms 5:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.
Kannada BSI Bible 2016
ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯಮಾಡುವವರೂ, ಕಪಟಿಗಳೂ ನಿನಗೆ ಹೇಯವಾಗಿದ್ದಾರೆ.
Kannada Bible (KNCL) BSI 2016
ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಳ್ಳಾಡುವವರನ್ನು ನೀವು ದಂಡಿಸುತ್ತೀರಿ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವ ದೇವರು ಅಸಹ್ಯಪಡುತ್ತಾರೆ.