Psalms 5:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು, ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
Kannada BSI Bible 2016
ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
Kannada Bible (KNCL) BSI 2016
ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನಾದರೋ, ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಿಮ್ಮ ಮನೆಗೆ ಬರುವೆನು; ಭಕ್ತಿಭಾವದಿಂದ ನಿಮ್ಮ ಪರಿಶುದ್ಧ ಆಲಯದ ಕಡೆಗೆ ತಲೆಬಾಗುವೆನು.