Psalms 5:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ವೈರಿಗಳು ನನ್ನನ್ನು ಗಮನಿಸುತ್ತಿರುವುದರಿಂದ ನಿನ್ನ ನೀತಿಯ ಮಾರ್ಗವನ್ನು ನನಗೆ ತೋರಿಸಿ, ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
Kannada BSI Bible 2016
ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ವಿರೋಧಿಗಳು ನನ್ನ ಕೇಡನ್ನೇ ಹಾರೈಸುತ್ತಿರುವದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡಿಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
Kannada Bible (KNCL) BSI 2016
ಶತ್ರುಗಳು ಮುತ್ತಿಹರು, ಸತ್ಯ ಪಥದಲಿ ನಡೆಸೆನ್ನನು I ನೇರಮಾಡೆನಗೆ ದೇವಾ, ನಿನ್ನ ಸಿರಿಮಾರ್ಗವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನನ್ನ ವಿರೋಧಿಗಳ ನಿಮಿತ್ತ ನಿಮ್ಮ ನೀತಿಯಲ್ಲಿ ನನ್ನನ್ನು ನಡೆಸಿರಿ; ನಿಮ್ಮ ಮಾರ್ಗವನ್ನು ನನ್ನ ಮುಂದೆ ನೇರವಾಗಿ ಮಾಡಿರಿ.