Psalms 50:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ದುಷ್ಟರಿಗೆ ಹೀಗೆನ್ನುವನು: “ನೀವು ನನ್ನ ಕಟ್ಟಳೆಗಳ ಕುರಿತು ಮಾತಾಡುವಿರಿ; ನನ್ನ ಒಡಂಬಡಿಕೆಯ ಕುರಿತು ಮಾತಾಡುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
Kannada BSI Bible 2016
ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟರಿಗಾದರೋ ದೇವರು ಹೇಳುವದೇನಂದರೆ - ನನ್ನ ವಿಧಿಗಳನ್ನು ಪಠಿಸುವದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ನಿಬಂಧನೆಯನ್ನು ಉಚ್ಚರಿಸುವದು ನಿಮಗೇನು ಕೆಲಸ?
Kannada Bible (KNCL) BSI 2016
ದುರ್ಜನರಿಗೆ ದೇವ ಹೇಳುವನು ಇಂತೆಂದು I “ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದುಷ್ಟನಿಗೆ ದೇವರು ಹೇಳುವುದೇನೆಂದರೆ: “ನನ್ನ ನಿಯಮಗಳನ್ನು ಪಠಿಸುವುದಕ್ಕೆ ಹಕ್ಕು ನಿಮಗೆ ಏನಿದೆ? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಛರಿಸುವುದೇಕೆ?