Psalms 50:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ನಿಮ್ಮನ್ನು ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
Kannada BSI Bible 2016
ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.
Kannada Bible (KNCL) BSI 2016
ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.