Psalms 50:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”
Kannada BSI Bible 2016
ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.
Kannada Bible (KNCL) BSI 2016
ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”