Psalms 51:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಜನರು ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿ ನಿನಗೆ ಸಂತೋಷವನ್ನು ಉಂಟು ಮಾಡುವರು. ಜನರು ನಿನ್ನ ಯಜ್ಞವೇದಿಕೆಯ ಮೇಲೆ ಹೋರಿಗಳನ್ನು ಮತ್ತೆ ಅರ್ಪಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.
Kannada BSI Bible 2016
ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ನ್ಯಾಯವಾದ ಯಜ್ಞಗಳನ್ನೂ ಸರ್ವಾಂಗ ಹೋಮಗಳನ್ನೂ ಸಮರ್ಪಿಸಿ ನಿನಗೆ ಸಂತೋಷವನ್ನುಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.
Kannada Bible (KNCL) BSI 2016
ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು I ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀತಿಯ ಯಜ್ಞಗಳಲ್ಲಿಯೂ ಸಂಪೂರ್ಣ ದಹನಬಲಿಗಳಲ್ಲಿಯೂ, ನೀವು ಸಂತೋಷಪಡುವಿರಿ; ಆಗ ನಿಮ್ಮ ಬಲಿಪೀಠದ ಮೇಲೆ ಹೋರಿಗಳನ್ನು ಅರ್ಪಿಸಲಾಗುವುದು.