Psalms 52:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ ಕಿತ್ತು ಬೀಸಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
Kannada BSI Bible 2016
ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿ ಬಿಡುವನು; ನಿನ್ನನ್ನು ಹಿಡಿದು ನಿವಾಸದೊಳಗಿಂದ ಕಿತ್ತುಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಸೆಲಾ.
Kannada Bible (KNCL) BSI 2016
ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು.