Psalms 52:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನಾದರೋ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
Kannada BSI Bible 2016
ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
Kannada Bible (KNCL) BSI 2016
ನಾನಾದರೋ ದೇಗುಲದಲಿ ಬೆಳೆದಿಹ ಎಣ್ಣೆಮರದಂತಿರುವೆನು I ದೇವರ ಸ್ಥಿರಪ್ರೀತಿಯನು ಯುಗಾಂತರಕು ನಂಬಿಕೊಂಡಿರುವೆನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನಾದರೋ ದೇವರ ಆಲಯದಲ್ಲಿರುವ ಅಭಿವರ್ದಿಸುವ ಓಲಿವ್ ಮರದ ಹಾಗೆ ಇರುವೆನು. ದೇವರ ಒಡಂಬಡಿಕೆಯ ಪ್ರೀತಿಯಲ್ಲಿ ಯುಗಯುಗಾಂತರವೂ ಭರವಸವಿಟ್ಟಿರುವೆನು.