Psalms 52:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕೆಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.
Kannada BSI Bible 2016
ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
[ದೇವರೇ] ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಅದನ್ನೇ ನಿರೀಕ್ಷಿಸಿಕೊಂಡಿರುವೆನು.
Kannada Bible (KNCL) BSI 2016
ನಿನ್ನುಪಕಾರವನು ಹೇ ದೇವಾ, ನಾ ಸದಾ ಸ್ಮರಿಸುವೆನು I ನಿನ್ನ ಶ್ರೇಷ್ಠ ನಾಮವನು ಭಕ್ತರ ಮುಂದೆ ಸ್ತುತಿಸುವೆನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ ನಿಮ್ಮ ಉಪಕಾರಕ್ಕಾಗಿ ಯಾವಾಗಲೂ ನಿಮ್ಮ ಭಕ್ತರ ಮುಂದೆ ನಿಮ್ಮನ್ನು ಸ್ತುತಿಸುತ್ತಿರುವೆನು. ನಿಮ್ಮ ಹೆಸರು ಒಳ್ಳೆಯದು. ಆದುದರಿಂದ ನಿಮ್ಮ ಹೆಸರನ್ನೇ ನಿರೀಕ್ಷಿಸಿಕೊಂಡಿರುವೆನು.
Recommended Reading