Psalms 53:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
Kannada BSI Bible 2016
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯಕೃತ್ಯಗಳನ್ನು ನಡಿಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
Kannada Bible (KNCL) BSI 2016
ಮನದಲಿ “ದೇವನಿಲ್ಲ” ಎನ್ನುವವರು ದುರ್ಮತಿಗಳು I ಹೇಯಕೃತ್ಯವೆಸಗುವವರು ಆ ಭ್ರಷ್ಟಾಚಾರಿಗಳು I ಒಳಿತನ್ನು ಮಾಡುವವರಾರೂ ಇಲ್ಲ ಅವರೊಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ.

Recommended Reading