Psalms 53:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೀಗೆನ್ನುತ್ತಾನೆ: “ಆ ದುಷ್ಟರಿಗೆ ಖಂಡಿತವಾಗಿ ಸತ್ಯವು ತಿಳಿದಿದೆ! ಆದರೆ ಅವರು ನನ್ನಲ್ಲಿ ಪ್ರಾರ್ಥಿಸುತ್ತಿಲ್ಲ. ಆಹಾರ ತಿನ್ನುವಂತೆ ಅವರು ನನ್ನ ಜನರನ್ನು ನಾಶಮಾಡಲು ಸಿದ್ಧರಾಗಿದ್ದಾರೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ.
Kannada BSI Bible 2016
ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟತ್ವವನ್ನು ನಡಿಸುವವರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ದೇವರನ್ನು ಸ್ಮರಿಸುವದಿಲ್ಲ.
Kannada Bible (KNCL) BSI 2016
ದುರ್ಜನರು ನನ್ನ ಜನರನು ಕೂಳಿನಂತೆ ನುಂಗುವುದೇಕೆ? I ದೇವರನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಅವರು ದೇವರನ್ನು ಸ್ಮರಿಸುವುದೇ ಇಲ್ಲ.