Psalms 53:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.
Kannada BSI Bible 2016
ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ.
Kannada Bible (KNCL) BSI 2016
ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.