Psalms 54:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.
Kannada BSI Bible 2016
ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.
Kannada Bible (KNCL) BSI 2016
ರಕ್ಷಿಸೆನ್ನನು ದೇವ, ನಿನ್ನ ನಾಮ ಶಕ್ತಿಯಿಂದ I ನ್ಯಾಯ ದೊರಕಿಸೆನಗೆ ನಿನ್ನ ಪರಾಕ್ರಮದಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನಿಮ್ಮ ಹೆಸರಿನಿಂದ ನನ್ನನ್ನು ರಕ್ಷಿಸಿರಿ. ನಿಮ್ಮ ಬಲದಿಂದ ನನಗೆ ನ್ಯಾಯತೀರಿಸಿರಿ.