Psalms 54:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ.
Kannada BSI Bible 2016
ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯರು ನನಗೆ ವಿರೋಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ. ಸೆಲಾ.
Kannada Bible (KNCL) BSI 2016
ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ.