Psalms 55:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕೆಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.
Kannada BSI Bible 2016
ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದು ಹೋಗಲಿ. ಅವರ ಮನೆಯಲ್ಲಿಯೂ ಮನಸ್ಸಿನಲ್ಲಿಯೂ ಕೆಟ್ಟತನವೇ.
Kannada Bible (KNCL) BSI 2016
ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರಣ ನನ್ನ ವೈರಿಗಳನ್ನು ತಟ್ಟನೆ ಹಿಡಿಯಲಿ. ಜೀವಸಹಿತ ಪಾತಾಳಕ್ಕೆ ಅವರು ಇಳಿಯಲಿ, ಅವರ ಮನೆಯಲ್ಲಿ ದುಷ್ಟತನವು ಇದೆ.