Psalms 55:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನನಗೆ ಕಿವಿಗೊಡುವನು. ಅನಾದಿಕಾಲದ ರಾಜನು ನನಗೆ ಸಹಾಯ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ.
Kannada BSI Bible 2016
ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. ಸೆಲಾ. ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವದಿಲ್ಲ.
Kannada Bible (KNCL) BSI 2016
ಆದಿಯಿಂದಾಳುವ ದೇವನು ಅವರ ಸೊಕ್ಕಡಗಿಸದೆ ಬಿಡನು I ಪರಿವರ್ತಿಸಲಾಗದು ದೇವಭಯವಿಲ್ಲದವರ ಹೃದಯವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಿಯಿಂದ ಸಿಂಹಾಸನಾರೂಢರಾಗಿರುವ ದೇವರು, ಅವರ ಮೊರೆಯನ್ನು ಕೇಳಿ ಅವರನ್ನು ತಗ್ಗಿಸುವರು, ಏಕೆಂದರೆ, ಅವರು ದೇವರಿಗೆ ಭಯಪಡುವುದಿಲ್ಲ. ದೇವರು ಬದಲಾಗುವುದಿಲ್ಲ.