Psalms 55:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.
Kannada BSI Bible 2016
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.
Kannada Bible (KNCL) BSI 2016
ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.