Psalms 55:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ವೈರಿಗಳು ನನ್ನ ಬಗ್ಗೆ ಕೆಟ್ಟದ್ದನ್ನೇ ಹೇಳಿದರು. ಆ ದುಷ್ಟರು ನನ್ನ ಮೇಲೆ ಅಬ್ಬರಿಸಿದರು. ನನ್ನ ವೈರಿಗಳು ಕೋಪದಿಂದ ನನ್ನ ಮೇಲೆ ಆಕ್ರಮಣ ಮಾಡಿದರು. ಅವರು ನನ್ನ ಮೇಲೆ ಆಪತ್ತುಗಳನ್ನು ಬರಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.
Kannada BSI Bible 2016
ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ ಹೊಯ್ದಾಡುತ್ತಾ ನರಳುತ್ತೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.
Kannada Bible (KNCL) BSI 2016
ಶತ್ರುಗರ್ಜನೆಯಿಂದ, ದುರುಳರ ಹಿಂಸೆಯಿಂದ I ಅವರೆನಗೆ ಬರಮಾಡಿರುವ ಆತಂಕದಿಂದ I ದ್ವೇಷಿಸುತಿಹರೆನ್ನನು ಕೋಪಾವೇಶದಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶತ್ರುವಿನ ಗರ್ಜನೆಯಿಂದಲೂ ದುಷ್ಟರ ಬೆದರಿಕೆಯಿಂದಲೂ ನರಳುತ್ತೇನೆ. ಏಕೆಂದರೆ ಅವರು ಅಪರಾಧವನ್ನು ನನ್ನ ಮೇಲೆ ಬರಮಾಡಿ, ಕೋಪದಿಂದ ನನ್ನನ್ನು ಹಗೆ ಮಾಡುತ್ತಾರೆ.