Psalms 56:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ನನ್ನನ್ನು ಕರುಣಿಸು; ವೈರಿಗಳು ನನ್ನ ಮೇಲೆ ಆಕ್ರಮಣಮಾಡಿದ್ದಾರೆ. ಅವರು ಸತತವಾಗಿ ನನ್ನನ್ನು ಬೆನ್ನಟ್ಟಿ ಹೋರಾಡುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.
Kannada BSI Bible 2016
ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ಕರುಣಿಸು; ನರರು ನನ್ನನ್ನು ನುಂಗಿಬಿಡಬೇಕೆಂದು ಎದ್ದಿದ್ದಾರೆ. ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.
Kannada Bible (KNCL) BSI 2016
ಕರುಣೆತೋರು ದೇವಾ, ಜನರೆನ್ನ ಬೆನ್ನಟ್ಟಿ ಬರುತಿಹರು I ದಿನವೆಲ್ಲ ಕದನ ಮಾಡಿ ಶತ್ರುಗಳೆನ್ನ ಬಾಧಿಸುತಿಹರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ ಕರುಣಿಸು, ಏಕೆಂದರೆ ಮನುಷ್ಯರು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ದಿನವೆಲ್ಲಾ ವಿರೋಧಿಸುತ್ತಾ ನನ್ನನ್ನು ಬಾಧಿಸುತ್ತಿದ್ದಾರೆ.