Psalms 56:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ದೇವರನ್ನು ಆತನ ವಾಗ್ದಾನಕ್ಕಾಗಿ ಕೊಂಡಾಡುವೆನು. ಯೆಹೋವನು ನನಗೆ ಮಾಡಿರುವ ವಾಗ್ದಾನಕ್ಕಾಗಿ ನಾನು ಆತನನ್ನು ಕೊಂಡಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
Kannada BSI Bible 2016
ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಲ್ಲಿ ಹೆಚ್ಚಳಪಟ್ಟು ಹಾಡಿ ಹರಸುತ್ತೇನೆ. ಯೆಹೋವನಲ್ಲಿ ಹೆಚ್ಚಳಪಟ್ಟು ಹಾಡಿಹರಸುತ್ತೇನೆ.
Kannada Bible (KNCL) BSI 2016
ನಾ ಹೆಮ್ಮೆಪಡುವುದು ದೇವನಲಿ, ಆತನ ವಾಗ್ದಾನದಲಿ I ನಾ ಹೆಮ್ಮೆಪಡುವುದು ಪ್ರಭುವಿನಲಿ, ಆತನ ವಾಗ್ದಾನದಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ದೇವರಲ್ಲಿಯೂ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು. ಹೌದು, ದೇವರಲ್ಲಿಯೂ ಯೆಹೋವ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು.