Psalms 56:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನಾನು ನಿನಗೆ ವಿಶೇಷ ಹರಕೆಗಳನ್ನು ಮಾಡಿದ್ದೇನೆ. ನಾನು ಮಾಡಿದ ಹರಕೆಗಳನ್ನು ಸಲ್ಲಿಸುವೆನು. ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.
Kannada BSI Bible 2016
ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.
Kannada Bible (KNCL) BSI 2016
ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ದೇವರೇ ನಾನು ನಿಮಗೆ ಸಲ್ಲಿಸಿದ ಹರಕೆಗಳಿಗೆ ಅಧೀನವಾಗಿದ್ದೇನೆ. ನಾನು ಉಪಕಾರ ಸ್ತುತಿಯ ಕಾಣಿಕೆಗಳನ್ನು ನಿಮಗೆ ಸಲ್ಲಿಸುವೆನು.